ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ...
ಸಕ್ಕರೆನಾಡು ನ್ಯೂಸ್

ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ
ಕೆ. ಹೊನ್ನಲಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.ಮದ್ದೂರು ತಾಲೂಕಿನ ಚುಂಚಗನಹಳ್ಳಿ ಗ್ರಾಮದ ಸುನಿಲ್ (29) ಮೃತ ದುರ್ದೈವಿ.
ಮೂವರು ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಹಂತಕರು ಅಡ್ಡಗಟ್ಟಿ
ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಂದಿದ್ದಾರೆ.
ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದ ಸುನಿಲ್ ನ ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯೆ ಸಾವನ್ನಪ್ಪಿದ್ದಾನೆ.
ಬೈಕ್ ನಲ್ಲಿದ್ದ ಸತೀಶ್ ಹಾಗು ಸಿದ್ದರಾಜುಗೆ ಯಾವುದೇ ಗಾಯವಾಗಿಲ್ಲ.
ಸ್ಥಳಕ್ಕೆ ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ...