ಇಂದು ಮಳವಳ್ಳಿ ಪಟ್ಟಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ 2023-24 ಮತ್ತು 2024-25 ನೇ ಸಾಲಿನ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ವತಿಯಿಂದ 20 ಫಲಾನುಭವಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರುಗಳ ವಿತರಣೆ ಮತ್ತು 2024-25 ನೇ ಸಾಲಿನಲ್ಲಿ ಆಯ್ಕೆಯಾಗಿರುವ 22 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅರ್ಹ ಫಲಾನುಭವಿಗಳಿಗೆ ಕಾರುಗಳು ಮತ್ತು ಹೊಲಿಗೆ ಯಂತ್ರಗಳನ್ನು ವಿತರಿಸಿ, ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳುವಂತೆ ಸಲಹೆ ನೀಡಿ, ಶುಭ ಹಾರೈಸಿದೆ.
